ಕುಲಸಚಿವರಾಗಿ ಪ್ರೊ.ಬಿ.ಎಲ್.ಲಕ್ಕಣ್ಣನವರ ಅಧಿಕಾರ ಸ್ವೀಕಾರ

Jul 28, 2025 - 23:48
 0
ಕುಲಸಚಿವರಾಗಿ ಪ್ರೊ.ಬಿ.ಎಲ್.ಲಕ್ಕಣ್ಣನವರ ಅಧಿಕಾರ ಸ್ವೀಕಾರ
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ವಿಜಯಪುರ : ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿರುವ ಪ್ರೊ.ಬಿ.ಎಲ್.ಲಕ್ಕಣ್ಣನವರ ಅವರು ಸೋಮವಾರ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನೂತನ ಮೌಲ್ಯಮಾಪನ ಕುಲಸಚಿವರಾಗಿ ಅಧಿಕಾರ ವಹಿಸಿಕೊಂಡರು. ಮಹಿಳಾ ವಿಶ್ವವಿದ್ಯಾನಿಲಯದ ಪ್ರಸ್ತುತ ಮೌಲ್ಯಮಾಪನ ಕುಲಸಚಿವರಾಗಿದ್ದ ಪ್ರೊ.ಎಚ್.ಎಂ.ಚ0ದ್ರಶೇಖರ್ ಅವರು ಪ್ರೊ.ಲಕ್ಕಣ್ಣನವರ ಅವರಿಗೆ ಅಧಿಕಾರ ಹಸ್ತಾಂತರಿಸಿದರು. 
ಪ್ರೊ.ಬಿ.ಎಲ್.ಲಕ್ಕಣ್ಣವರ ಅವರನ್ನು ತಕ್ಷಣ ಜಾರಿಗೆ ಬರುವಂತೆ ನೇಮಕ ಮಾಡಿ ಉನ್ನತ ಶಿಕ್ಷಣ ಇಲಾಖೆ ಶನಿವಾರ ಆದೇಶ ಹೊರಡಿಸಿತ್ತು. 
ಅಲ್ಲದೇ ಪ್ರೊ.ಎಚ್. ಎಂ.ಚAದ್ರಶೇಖರ್ ಅವರ ಸೇವೆಯನ್ನು ಅವರ ಮಾತೃ ಸಂಸ್ಥೆಯಾಗಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ತಕ್ಷಣ ಜಾರಿಗೆ ಬರುವಂತೆ ಹಿಂತಿರುಗಿಸಲಾಗಿದೆ ಎಂದೂ  ಉನ್ನತ ಶಿಕ್ಷಣ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿತ್ತು. ಪ್ರೊ.ಲಕ್ಕಣ್ಣನವರ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ ಉಪಸ್ಥಿತರಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.