ಇಂದು ಇಂಡಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

ಪೂರ್ವಭಾವಿ ಸಿದ್ಧತೆ ಕುರಿತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ. ಆನಂದ ಕೆ.

Jul 14, 2025 - 09:08
 0
ಇಂದು ಇಂಡಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 
ವಿಜಯಪುರ : ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಇಂದು ಜುಲೈ ೧೪ ರಂದು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಜುಲೈ ೧೩ರ ಭಾನುವಾರ ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ ಅವರು, ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ,ಕೈಗೊಂಡಿರುವ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು. 

ಸಿದ್ಧತೆಗಳ ಪರಿಶೀಲನೆ ನಡೆಸಿದ ಅವರು, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಭದ್ರತಾ ವ್ಯವಸ್ಥೆ,ವೇದಿಕೆ ವ್ಯವಸ್ಥೆ, ಉದ್ಘಾಟನೆಗೊಳ್ಳಲಿರುವ ಬೃಹತ್ ವಾಣಿಜ್ಯ ಸಂಕೀರ್ಣ ಸ್ಥಳ ಕುರಿತು ಪರಿಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. 
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ,ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ,ಇಂಡಿ ಡಿವೈಎಸ್ಪಿ ಜಗದೀಶ,ಇಂಡಿ ತಹಶೀಲ್ದಾರರಾದ ಬಿ.ಎಸ್.ಖಡಕ್ ಭಾವಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.