ಇಂಡಿ ಭಾಗದಲ್ಲಿ ಅಭಿವೃದ್ಧಿಯ ಕ್ರಾಂತಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ

Jul 15, 2025 - 00:57
 0
ಇಂಡಿ ಭಾಗದಲ್ಲಿ ಅಭಿವೃದ್ಧಿಯ ಕ್ರಾಂತಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ

ವಿಜಯಪುರ :  ಎಲ್ಲ ಗುಣಗಳಿಗಿಂತೆ ದೊಡ್ಡ ಗುಣ ನಂಬಿಕೆ. ನೀವು ಮೂರು ಬಾರಿ ನಂಬಿಕೆ ಇಟ್ಟು ನಿಮ್ಮ ಕ್ಷೇತ್ರದ ಶಾಸಕರನ್ನು ಆಯ್ಕೆ ಮಾಡಿದ್ದೀರಿ. ನೀವು ಇಟ್ಟಂತಹ ನಂಬಿಕೆಗೆ ಈ ಭಾಗದಲ್ಲಿ ಅಭಿವೃದ್ದಿ ಕ್ರಾಂತಿ ಹರಿಸಿ,  ೪೫೫೯ ಕೋಟಿ ರೂ.ಗಳ ವಿವಿಧ ಅಭಿವೃದ್ದಿ ಕಾರ್ಯಗಳ ಉದ್ಘಾಟನೆ- ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಹೇಳಿದರು.

             
ಶ್ರೀ ಸಿದ್ದೇಶ್ವರ ಮೆಗಾ ಮಾರುಕಟ್ಟೆ ಉದ್ಘಾಟನೆ, ಸೋಮವಾರ ಇಂಡಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಲಾದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ-ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಲಿಂಬೆ ಅಭಿವೃದ್ದಿ ಮಂಡಳಿ ಲಾಂಛನ ಬಿಡುಗಡೆಗೊಳಿಸಿ ಅವರು ಮಾತನಾಡಿದರು.              

ರಾಜ್ಯದಲ್ಲಿ ಅಭಿವೃದ್ದಿ ಕುಂಠಿತವಾಗಿದೆ ಎಂಬ ಆರೋಪಕ್ಕೆ ನಿಮ್ಮ ಭಾಗದ ಅಭಿವೃದ್ದಿಗೆ ಉತ್ತರವಾಗಿದೆ. ಇಂಡಿ ಕ್ಷೇತ್ರಕ್ಕೆ ನೀರಾವರಿಗೆ ರಾಜ್ಯದಲ್ಲಿಯೇ ಅತಿ ಹೆಚ್ಚಿನ ಅನುದಾನ ಒದಗಿಸಲಾಗಿದೆ. ನಿಂಬೆ ನಾಡು ಎಂದು ಪ್ರಸಿದ್ದಿ ಪಡೆದ ಇಂಡಿ ಭಾಗದಲ್ಲಿ ನಿಂಬೆ ಅಭಿವೃದ್ದಿಗಾಗಿ ಹಣ ನೀಡಲಾಗಿದೆ.                     

೯೩ ಸಾವಿರ ಎಕರೆ ಜಮೀನು ನೀರಾವರಿಗೊಳಪಡಿಸುವ ಯೋಜನೆಗಳನ್ನು ಒದಗಿಸಲಾಗಿದೆ. ಕೆಕೆಆರ್‌ಟಿಸಿಯಲ್ಲಿ ೫ ಸಾವಿರ ಉದ್ಯೋಗಗಳನ್ನು ಸೃಜಿಸಲಾಗಿದೆ. ಸರ್ಕಾರದ ಎರಡು ವರ್ಷದ ಸಾಧನೆ -ಸಮರ್ಪಣೆ ಕಾರ್ಯಕ್ರಮದಲ್ಲಿ  ದಾಖಲೆಗಳಿಲ್ಲದೇ ವಾಸಿಸುವ ೧.೧೧ ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಗಿದೆ. ಜನರ ಬದುಕು ಹಸನಾಗಿಸುವ ನಿಟ್ಟಿನಲ್ಲಿ  ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ನಮ್ಮ ಸರ್ಕಾರ ಜಾರಿ ಮಾಡಿದ ಗ್ಯಾರಂಟಿ ಯೋಜನೆಗಳು ದೇಶದಲ್ಲಿಯೇ ಮಾದರಿಯಾಗಿವೆ. ಈ ಭಾಗದ ಸಚಿವರಾದ ಎಂ.ಬಿ.ಪಾಟೀಲ ಹಾಗೂ ಶಿವಾನಂದ ಪಾಟೀಲ ಆಶಯದಂತೆ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸಿ ಜಿಲ್ಲೆಯ ಅಭಿವೃದ್ದಿಗಾಗಿ ಹಲವು ಯೋಜನೆಗಳನ್ನು ಸರ್ಕಾರ ಪ್ರಕಟಿಸಲಿದೆ ಎಂದು ಅವರು ಹೇಳಿದರು.         

ಸೋಮವಾರ ಶಕ್ತಿ ಯೋಜನೆಯಡಿ ೫೦೦ ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಸಿಎಂ ಸಿದ್ದರಾಮಯ್ಯ ಪೂಜೆ ನೆರವೇರಿಸಿದರು.                 

ಕಾರ್ಯಕ್ರಮದಲ್ಲಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡುರಾವ್, ಸಮಾಜ  ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವ ಶರಣಬಸಪ್ಪ ದರ್ಶನಾಪೂರ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್  ಪಾಟೀಲ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಶಾಸಕ ಹಂಪನಗೌಡ ಬಾದರ್ಲಿ, ಶಾಸಕರುಗಳಾದ ಇಂಡಿ ಯಶವಂತರಾಯಗೌಡ ಪಾಟೀಲ  ಸುನೀಲಗೌಡ ಪಾಟೀಲ, ವಿಠ್ಠಲ ಕಟಕಧೋಂಡ, ಅಶೋಕ ಎಮ್ ಮನಗೂಳಿ, ಎಂ ವೈ ಪಾಟೀಲ, ಮಾಜಿ ಶಾಕರಾದ ಶರಣಪ್ಪ ಸುಣಗಾರ, ರಾಜು ಆಲಗೂರ, ಧಾರಾವಾಡ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ, ಇಂಡಿ ಪುರಸಭೆಯ ಅಧ್ಯಕ್ಷರಾದ ಅಂಬಾಜಿ ರಾಠೋಡ, ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಮೋಹನರಾಜ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ, ಜಿಲ್ಲಾಧಿಕಾರಿ ಡಾ.ಆನಂದ ಕೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ಬಿ ನಿಂಬರಗಿ ಸೇರಿದಂತೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು ಅಧಿಕಾರಿಗಳು ಉಪಸ್ಥಿತರಿದ್ದರು. 

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.