ಸರ್ಕಾರದ ಯೋಜನೆ ಜನರ ಸಾಮಾನ್ಯರ ಬದುಕಿನ ಆಸರೆ : ಎಸ್.ಆರ್ ಪಾಟೀಲ್

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ವಿಜಯಪುರ : ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್ ಪಾಟೀಲ್ (ಬ್ಯಾಡಗಿ)ಅವರು ಶುಕ್ರವಾರ ಚಡಚಣ ತಾಲ್ಲೂಕಿನ ರೇವತಗಾಂವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಶಿರಾಡೋಣ ಹಾಗೂ ಇಂಡಿ ತಾಲೂಕಿನ ಬಬಲಾದ ಗ್ರಾಮಕ್ಕೆ ಭೇಟಿ ನೀಡಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷಿö್ಮÃ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡು ಮನೆ ನಿರ್ಮಾಣ ಮಾಡಿಕೊಂಡ ಫಲಾನುಭವಿ ಮನೆಗೆ ಭೇಟಿ ನೀಡಿದ ಅವರು, ಶ್ರೀಮತಿ ನೀಲಾಬಾಯಿ ಪಾಂಡ್ರೆ ಅವರೊಂದಿಗೆ ಸಂವಾದ ನಡೆಸಿದರು.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯು ಜನರಿಗೆ ಬದುಕಿನ ಆಸರೆಯಾಗಿವೆ. ಉತ್ತಮವಾಗಿ ಸದುಪಯೋಗ ಪಡೆದುಕೊಂಡು ಮಾದರಿಯಾಗಿರುವುದು ಸಂತಸವಾಗಿದೆ. ಗ್ಯಾರಂಟಿ ಯೋಜನೆಗಳ ಲಾಭ ಪಡೆದುಕೊಂಡು ಉತ್ತಮ ಜೀವನ ನಿರ್ವಹಿಸಬೇಕು ಎಂದು ಹೇಳಿದರು.
ಶಕ್ತಿ ಯೋಜನೆಯ ಸದುಪಯೋಗ ಪಡೆದುಕೊಂಡ ಫಲಾನುಭವಿಗಳಾದ ಒಡಲಧ್ವನಿ ಒಕ್ಕೂಟದ ಸದಸ್ಯರನ್ನು ಭೇಟಿ ಮಾಡಿ ಚರ್ಚಿಸಿದರು. ಒಡಲ ಧ್ವನಿ ಒಕ್ಕೂಟದ ಸದಸ್ಯರು ಸಾವಯವ ಕೃಷಿ ಮಾಡಿ ಅದಕ್ಕೆ ಪೂರಕವಾಗಿ ಪರಿಶುದ್ಧವಾದ ಆಹಾರವನ್ನು ಒದಗಿಸುತ್ತಿರುವುದು ಅತ್ಯಂತ ಶ್ರೇಷ್ಠವಾದದ್ದು. ಸಾಮಾಜಿಕವಾಗಿ ಆರ್ಥಿಕವಾಗಿ ವಿಶೇಷವಾಗಿ ಶೈಕ್ಷಣಿಕವಾಗಿ ಉನ್ನತಿಗೆ ಸೌಲಭ್ಯಗಳು ಅತಿ ಮುಖ್ಯ. ಈಗಿನ ಸರ್ಕಾರ ಜನರ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ತಮ್ಮ ಆರ್ಥಿಕ ಸುಸ್ಥಿರತೆಯನ್ನು ಸುಭದ್ರಪಡಿಸಿಕೊಳ್ಳಬೇಕು ಎಂದು ಹೇಳಿದರು.
ಮುಖ್ಯಮಂತ್ರಿಗಳು ಮಹಿಳೆಯರು ಆರ್ಥಿಕ ಸ್ವಾವಲಂಬನೆ ಹೊಂದಬೇಕೆAಬ ಆಶಯ ಹೊಂದಿ, ಮಹಿಳಾ ಸಬಲೀಕರಣಕ್ಕೆ ಸರ್ಕಾರ ಒತ್ತು ನೀಡಿದೆ. ಎಲ್ಲ ವರ್ಗದ ಜನರು ಉತ್ತಮ ಬದುಕು ರೂಪಿಸಿಕೊಳ್ಳಬೇಕೆಂಬ ಸದುದ್ದೇಶದಿಂದ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಸದುಪಯೋಗಕ್ಕೆ ಮುಂದಾಗಬೇಕು ಎಂದು ಅವರು ಹೇಳಿದರು.
ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿ ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸಿದೆ. ಈ ಯೋಜನೆಯ ಸದುಪಯೋಗ ಸಮಾಜದ ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು. ಅಂದಾಗ ಮಾತ್ರ ಯೋಜನೆಗೆ ಸಾರ್ಥಕತೆ ಬರುತ್ತದೆ. ಸರ್ಕಾರದ ಯೋಜನೆಯ ಸದುಪಯೋಗ ಪಡೆದುಕೊಂಡ ನಮ್ಮ ಬಬಲಾದ ಗ್ರಾಮದ ಮಾದರಿಯಂತೆ ಪ್ರತಿಯೊಬ್ಬರು ಸದುಪಯೋಗಕ್ಕೆ ಮುಂದಾಗಬೇಕು ಎಂದು ಗ್ರಾಮದ ಫಲಾನುಭವಿ ಭುವನೇಶ್ವರಿ ಎಂಬುವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಜಿಲ್ಲಾ ಅಧ್ಯಕ್ಷರಾದ ಇಲಿಯಾಸ್ ಬೋರಾಮಣಿ, ಚಡಚಣದ ತಾಲೂಕ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ರವಿದಾಸ್ ಜಾದವ್, ಇಂಡಿ ತಾಲೂಕಿನ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರಾದ ಪ್ರಶಾಂತ್ ಕಾಳೆ, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂಜಯ್ ಖಡಗೆಕರ್, ತಾಲೂಕ್ ಪಂಚಾಯತಿಯ ಸಹಾಯಕ ನಿರ್ದೇಶಕರಾದ (ಗ್ರಾ. ಉ) ಶಿವದತ್ತ ಕೊಟ್ಟಲಗಿ, ಗ್ಯಾರಂಟಿ ಯೋಜನೆಯ ಎಲ್ಲ ಸದಸ್ಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ್ ಸಿಬ್ಬಂದಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.