ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ, ಸಂಸದ ಜಿಗಜಿಣಗಿಗೆ ಭೇಟಿ : ವಿಶ್ವವಿದ್ಯಾಲಯದ ಬೆಳವಣಿಗೆ ಬಗ್ಗೆ ಚರ್ಚೆ
Vice Chancellor Prof. Vijaya Korishetty meets MP Jigajinagi: Discussion on the growth of the women’s university

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರು ಲೋಕಸಭಾ ಸದಸ್ಯ ರಮೇಶ್ ಜಿಗಜಿಣಗಿ ಅವರನ್ನು ಶನಿವಾರ ಭೇಟಿ ಮಾಡಿ ವಿಶ್ವವಿದ್ಯಾಲಯದ ವಿವಿಧ ಅಭಿವೃದ್ಧಿ ಚಟುವಟಿಕೆಗಳ ಕುರಿತು ಚರ್ಚೆ ನಡೆಸಿದರು.
ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಶೈಕ್ಷಣಿಕ ಮತ್ತು ಮೂಲಸೌಕರ್ಯ ವಿಸ್ತರಣೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ, ವಿದ್ಯಾರ್ಥಿನಿಯರ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಹೊಸ ಯೋಜನೆಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಯೋಜನೆಗಳ ಕುರಿತು ವಿವರಿಸಿದರು.
ಮಹಿಳಾ ವಿಶ್ವವಿದ್ಯಾಲಯದ ಬೆಳವಣಿಗೆಗೆ ಅಗತ್ಯವಾದ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ ಸಂಸದ ರಮೇಶ್ ಜಿಗಜಿಣಗಿ ಅವರು ವಿಶೇಷವಾಗಿ ಮಹಿಳಾ ಶಿಕ್ಷಣದ ಮೂಲಕ ಸಮಾಜದ ಸಬಲೀಕರಣ ಸಾಧ್ಯ ಎಂದರು. ಕೇಂದ್ರ ಹಾಗೂ ರಾಜ್ಯ ಮಟ್ಟದಲ್ಲಿ ಲಭ್ಯವಾಗಬಹುದಾದ ನೆರವಿಗಾಗಿ ತಾವು ಸಕ್ರಿಯವಾಗಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.