ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ವಿಜಯಪುರ : ಇಂಡಿ ಕ್ಷೇತ್ರದಲ್ಲಿ ಇಂದು ಐತಿಹಾಸಿಕ ದಿನ. ರಾಜಸ್ಥಾನದಲ್ಲಿ ಜೈಸಲ್ಮೇರ್ ಹಾಗೂ ರಾಜ್ಯದಲ್ಲಿ ವಿಜಯಪುರ ಅತಿ ಬರಗಾಲ ಪೀಡಿತ ಪ್ರದೇಶವೆಂದಾಗಿತ್ತು. ಕಳೆದ ೨೦೧೩-೧೮ರ ಅವಧಿಯಲ್ಲಿ ಕೈಗೊಂಡ ನೀರಾವರಿ ಯೋಜನೆಗಳಿಂದ ಈ ಭಾಗದಲ್ಲಿ ಅಂತರ-ಜಲ ಮಟ್ಟ ಹೆಚ್ಚಾಗಿದೆ. ವಾಯ್ ಅಕ್ವಾಡೆಕ್ಟ ನಿರ್ಮಾಣ ಮಾಡುವ ಮೂಲಕ ಕೃಷ್ಣೆಯಿಂದ ಭೀಮೆಗೆ ನೀರು ಹರಿಸಲಾಗಿದೆ. ೫೬ ಸಾವಿರ ಕೋಟಿ ರೂ. ವೆಚ್ಚ ಮಾಡಿ ಹಿಂದುಳಿದ ಹಣೆಪಟ್ಟಿ ತೆಗೆದುಹಾಕಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.
ಸೋಮವಾರ ಶ್ರೀ ಸಿದ್ದೇಶ್ವರ ಮೆಗಾ ಮಾರುಕಟ್ಟೆ ಉದ್ಘಾಟನೆ, ಇಂಡಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಲಾದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ-ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಲಿಂಬೆ ಅಭಿವೃದ್ದಿ ಮಂಡಳಿ ಲಾಂಛನ ಬಿಡುಗಡೆ ಕಾರ್ಯಕ್ರಮಲ್ಲಿ ಅವರು ಮಾತನಾಡಿದರು.
ಸೋಮವಾರ ಶಕ್ತಿ ಯೋಜನೆಯಡಿ ೫೦೦ ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಸಿಎಂ ಸಿದ್ದರಾಮಯ್ಯ ಪೂಜೆ ನೆರವೇರಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡುರಾವ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವ ಶರಣಬಸಪ್ಪ ದರ್ಶನಾಪೂರ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಶಾಸಕ ಹಂಪನಗೌಡ ಬಾದರ್ಲಿ, ಶಾಸಕರುಗಳಾದ ಇಂಡಿ ಯಶವಂತರಾಯಗೌಡ ಪಾಟೀಲ ಸುನೀಲಗೌಡ ಪಾಟೀಲ, ವಿಠ್ಠಲ ಕಟಕಧೋಂಡ, ಅಶೋಕ ಎಮ್ ಮನಗೂಳಿ, ಎಂ ವೈ ಪಾಟೀಲ, ಮಾಜಿ ಶಾಕರಾದ ಶರಣಪ್ಪ ಸುಣಗಾರ, ರಾಜು ಆಲಗೂರ, ಧಾರಾವಾಡ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ, ಇಂಡಿ ಪುರಸಭೆಯ ಅಧ್ಯಕ್ಷರಾದ ಅಂಬಾಜಿ ರಾಠೋಡ, ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಮೋಹನರಾಜ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ, ಜಿಲ್ಲಾಧಿಕಾರಿ ಡಾ.ಆನಂದ ಕೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ಬಿ ನಿಂಬರಗಿ ಸೇರಿದಂತೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.