ಅಸಂಘಟಿತ ಕಾರ್ಮಿಕರು ಸ್ಮಾರ್ಟ್ ಕಾರ್ಡ್ ಪಡೆದುಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಿ : ಸಚಿವ ಸಂತೋಷ ಲಾಡ್

Jul 24, 2025 - 08:25
 0
ಅಸಂಘಟಿತ ಕಾರ್ಮಿಕರು ಸ್ಮಾರ್ಟ್ ಕಾರ್ಡ್ ಪಡೆದುಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಿ : ಸಚಿವ ಸಂತೋಷ ಲಾಡ್
ಕಂದಗಲ್ ಶ್ರೀ ಹನುಮಂತರಾಯ ರಂಗಮ0ದಿರದಲ್ಲಿ ಬುಧವಾರ ಆಯೋಜಿಸಿದ  ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲೆಯ ವಿವಿಧ  ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ವಿತರಿಸಿ ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ಅವರು ಮಾತನಾಡಿದರು.  
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 
ವಿಜಯಪುರ : ಅಸಂಘಟಿತ ವಲಯದ ಕಾರ್ಮಿಕರಿಗೆ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ೯೧ ಅಸಂಘಟಿತ ವರ್ಗಗಳ ಕಾರ್ಮಿಕರನ್ನು  ಗುರುತಿಸಲಾಗಿದ್ದು, ಸುಮಾರು ೩೦ ರಿಂದ ೪೦ ಲಕ್ಷ ಕಾರ್ಮಿಕರು ಒಳಗೊಂಡಿದ್ದು, ಈ ಕಾರ್ಮಿಕರನ್ನು ಉಚಿತವಾಗಿ ನೊಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮ0ದಿರದಲ್ಲಿ ಬುಧವಾರ ಆಯೋಜಿಸಿದ  ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲೆಯ ವಿವಿಧ  ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ವಿತರಿಸಿ ಅವರು ಮಾತನಾಡಿದರು.
 
ಸರ್ಕಾರದಿಂದ ಜಾರಿಗೊಂಡಿರುವ ಸೌಲಭ್ಯಗಳು ಕಾರ್ಮಿಕರಿಗೆ ತಲುಪಿಸುವ  ನಿಟ್ಟಿನಲ್ಲಿ ಸ್ಮಾರ್ಟ್ ಕಾರ್ಡ್ ಒದಗಿಸಲಾಗುತ್ತಿದ್ದು, ಈವರೆಗೆ ರಾಜ್ಯದಲ್ಲಿ ೨೫,೪೫,೬೦೭ ಕಾರ್ಮಿಕರು ನೊಂದಣಿಯಾಗಿದ್ದು, ವಿಜಯಪುರ ಜಿಲ್ಲೆಯಲ್ಲಿ ೧೦೨೯೭೧ ನೊಂದಾಯಿಸಿಕೊAಡ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ. ಅಸಂಘಟಿತ ಕಾರ್ಮಿಕರು ಸ್ಮಾರ್ಟ್ ಕಾರ್ಡ್ ಪಡೆದುಕೊಂಡು ಸರ್ಕಾರದ ಯೋಜನೆಗಳ ಲಾಭ ಪಡೆದು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.  ಖಾಸಗಿ ವಾಣಿಜ್ಯ ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕ್ಕಿಂಗ್ ಗುಮಾಸ್ತ್, ಸಮಯ ಪಾಲಕರು, ಕಾವಲುಗಾರ ಹಾಗೂ ಪರಿಚಾರಕರು, ಮೋಟಾರ್ ಗ್ಯಾರೇಜ್‌ಗಳಲ್ಲಿ ಟೈರ್ ಜೋಡಿಸುವ ಮತ್ತು ಬೇರ್ಪಡಿಸುವ ಘಟಕಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರು ಸೇರಿದಂತೆ ವಿವಿಧ ಕಾರ್ಮಿಕರನ್ನು  ಸಾಮಾಜಿಕ ಭದ್ರತಾ ಸೌಲಭ್ಯದಡಿ ಒಳಪಡಿಸಲಾಗಿದೆ ಎಂದು ಅವರು ಹೇಳಿದರು.  
ಕಾರ್ಯಕ್ರಮದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಂಟಿ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿಗಳಾದ ಡಾ.ಎಸ್.ಬಿ.ರವಿಕುಮಾರ, ಕಾರ್ಮಿಕ ಇಲಾಖೆ ಉಪ ಕಾರ್ಮಿಕ ಆಯುಕ್ತರಾದ ಡಿ.ಜಿ.ನಾಗೇಶ, ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ.ನಾಗರಾಜ, ಕಾರ್ಮಿಕ ಅಧಿಕಾರಿ ಶ್ರೀಮತಿ ಉಮಾಶ್ರೀ ಕೋಳಿ ಸೇರಿದಂತೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಕಾರ್ಮಿಕ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.