ಆಶಾ ದೀಪ ಯೋಜನೆಯಿಂದ ಉದ್ಯೋಗದಾತರಿಗೆ ಉತ್ತೇಜನ : ಸಚಿವ ಸಂತೋಷ ಲಾಡ್

Jul 24, 2025 - 08:27
 0
ಆಶಾ ದೀಪ ಯೋಜನೆಯಿಂದ ಉದ್ಯೋಗದಾತರಿಗೆ ಉತ್ತೇಜನ : ಸಚಿವ ಸಂತೋಷ ಲಾಡ್
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 
ವಿಜಯಪುರ : ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೀದರ ಮಾದರಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸೊಸಾಯಿಟಿ ರಚನೆ ಮಾಡಿ ಸೊಸಾಯಿಟಿ ಮೂಲಕವೇ ವೇತನ ಪಾವತಿಸುವ ವ್ಯವಸ್ಥೆ  ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ವಿವಿಧ ಖಾಸಗಿ ವಲಯದ ಕೈಗಾರಿಕೆ, ಕಾರ್ಖಾನೆಗಳಲ್ಲಿ ಹೆಚ್ಚೆಚ್ಚು  ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಆಶಾ ದೀಪ ಯೋಜನೆಯನ್ನು ಜಾರಿಗೊಳಿಸಿ ಮಾಲೀಕರು ಹಾಗೂ ಉದ್ಯೋಗದಾತರನ್ನು ಉತ್ತೇಜಿಸಲಾಗುತ್ತಿದೆ ಎಂದು ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮ0ದಿರದಲ್ಲಿ ಬುಧವಾರ ಆಯೋಜಿಸಿದ  ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲೆಯ ವಿವಿಧ  ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ವಿತರಿಸಿ ಅವರು ಮಾತನಾಡಿದರು.
ಸರ್ಕಾರ ಜಾರಿಗೊಳಿಸಿರುವ  ಪಂಚ್ ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಹಸನಗೊಳಿಸಿದೆ. ಶಕ್ತಿ ಯೋಜನೆಯಡಿ ೫೦೦ ಕೋಟಿ ಬಾರಿ ಪ್ರಯಾಣ ಬೆಳೆಸಲಾಗಿದೆ. ಸರ್ಕಾರದಿಂದ ಪಂಚ್ ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ೬೦ ಸಾವಿರ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಎಲ್ಲ ವರ್ಗದ ಜನರನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಡಿ ಸೌಲಭ್ಯಗಳನ್ನು ದೊರಕಿಸಲಾಗುತ್ತಿದೆ ಎಂದು ಅವರು ಹೇಳಿದರು. 
ಕಾರ್ಯಕ್ರಮದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಂಟಿ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿಗಳಾದ ಡಾ.ಎಸ್.ಬಿ.ರವಿಕುಮಾರ, ಕಾರ್ಮಿಕ ಇಲಾಖೆ ಉಪ ಕಾರ್ಮಿಕ ಆಯುಕ್ತರಾದ ಡಿ.ಜಿ.ನಾಗೇಶ, ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ.ನಾಗರಾಜ, ಕಾರ್ಮಿಕ ಅಧಿಕಾರಿ ಶ್ರೀಮತಿ ಉಮಾಶ್ರೀ ಕೋಳಿ ಸೇರಿದಂತೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಕಾರ್ಮಿಕ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.