ಡಾ.ಬಾಬಾಸಾಹೇಬರ ಕೊಡುಗೆ ಅಪಾರ : ಸಚಿವ ಸತೀಶ ಜಾರಕಿಹೊಳಿ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ವಿಜಯಪುರ : ದೇಶಕ್ಕೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ರಾಜ್ಯಕ್ಕೆ ಪ್ರೊ. ಬಿ ಕೃಷ್ಣಪ್ಪ ಅವರ ಕೊಡುಗೆ ಅಪಾರವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಮಂಗಳವಾರ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ ಕೃಷ್ಣಪ್ಪ ಬಣ) ವಿಜಯಪುರ ಜಿಲ್ಲಾ ಸಮಿತಿಯಿಂದ ನಗರದ ಕಂದಗಲ್ ಹನುಮಂತರಾಯ ರಂಗಮ0ದಿರದಲ್ಲಿ ಹಮ್ಮಿಕೊಂಡಿದ್ದ ಸಾಮಾಜಿಕ ಸಮಾನತೆಗಾಗಿ ಸಂವಿಧಾನ ಮತ್ತು ಡಾ.ಅಂಬೇಡ್ಕರ ಎಂಬ ಜನಾಂದೋಲನ ಸಮಾವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಸಾಮಾಜಿಕ ನ್ಯಾಯ ಸಿಗಬೇಕು ಅಂದರೆ ಸಂಘಟಿತರಾರಗಿ ಹೋರಾಟ ಮಾಡಬೇಕು. ಅಂತ ಹೋರಾಟ ಪ್ರೊ. ಬಿ ಕೃಷ್ಣಪ್ಪ ನವರು ರಾಜ್ಯದ ಮೂಲೆ ಮೂಲೆಗೆ ಹೋಗಿ ಸಂಘಟನೆ ಕಟ್ಟಿದ್ದಾರೆ. ಅಂಬೇಡ್ಕರ್ ಅವರ ವಿಚಾರ ಮೈಗೂಡಿಸಿಕೊಂಡು ಹಗಲಿರುಳು ಎನ್ನದೆ ಹೋರಾಟ ಮಾಡಿದ್ದಾರೆ. ಸಂವಿಧಾನ ವಿರೋಧಿ ಹೇಳಿಕೆಗಳು ಹಾಗೂ ಸಂವಿಧಾನ ತಿರಸ್ಕಾರ ಮಾಡುವವರ ವಿರುದ್ಧ ನಾವು ಸದಾ ಎಚ್ಚರಿಕೆ ವಹಿಸಬೇಕು. ನಮ್ಮ ದೇಶಕ್ಕೆ ಸ್ವತಂತ್ರ ಬಂದು ೭೮ ವರ್ಷ ಕಳೆದರೂ ಸಮಾನತೆ ದೊರಕಿಲ್ಲ. ಈಗಲೂ ದೇವಸ್ಥಾನಗಳಿಗೆ ದಲಿತರಿಗೆ, ಅಸ್ಪೃಶ್ಯರಿಗೆ ಪ್ರವೇಶವಿಲ್ಲ. ಒಂದು ವೇಳೆ ಪ್ರವೇಶ ಮಾಡಿದರೆ ದಂಡ ವಿಧಿಸಿವುದು ಜಾರಿಯಲ್ಲಿದೆ. ಇದು ಬದಲಾಗಬೇಕು. ಸಮಾನತೆಗಾಗಿ ಹೋರಾಟ ಮಾಡುವ ಅಗತ್ಯವಿದೆ. ಸಂವಿಧಾನ ರಕ್ಷೆಣೆ ಮಾಡುವುದು ನಮ್ಮಲ್ಲರ ಜವಾಬ್ದಾರಿಯಾಗಿದೆ" ಎಂದರು.
ಕಾರ್ಯಕ್ರಮದಲ್ಲಿ ಅಶೋಕ ಛಲವಾದಿ, ಶರಣು ಶಿಂಧೆ, ಪ್ರಕಾಶ ಗುಡಿಮನಿ, ಪರಶು ದಿಂಡಿವಾರ, ಲಕ್ಕಪ್ಪ ಬಡಿಗೇರ, ಮಾಜಿ ಶಾಸಕ ಪ್ರೊ. ರಾಜು ಆಲಗೂರ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಡಾ.ಮಹಾಂತೇಶ ಬಿರಾದಾರ, ರಾಜ್ಯ ಸಂಚಾಲಕ ಶ್ರೀನಿವಾಸ ಹೆಣ್ಣುರೂ, ಸಿಂದಗಿ ಮಾಜಿ ಶಾಸಕ ಶರಣಪ್ಪ ಸುಣಗಾರ, ಅಬ್ದುಲ್ ಹಮೀದ್ ಮುಶ್ರೀಫ್ ಹಾಗೂ ಸಂಘಟನೆಯ ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.