ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ವಿಜಯಪುರ: ನಗರದ ಆಶ್ರಮ ರಸ್ತೆಯಲ್ಲಿರುವ ಸ್ವಪ್ನ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆ’ಗೆ ಇಂದು ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಮಕ್ಕಳ ಕಲಿಕಾ ಪರಿಸ್ಥಿತಿಗಳ ಬಗ್ಗೆ ವಿಚಾರಿಸಿದರು.
ತರಗತಿ ಕೊಠಡಿ, ಲ್ಯಾಬ್, ಗ್ರಂಥಾಲಯ ಸೇರಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು, ಅಧ್ಯಾಪಕರು ಹಾಗೂ ಸಿಬ್ಬಂದಿಗಳಿ0ದ ಮಾಹಿತಿ ಪಡೆದರು.
ವಿದ್ಯಾರ್ಥಿಗಳು ಅಭಿಪ್ರಾಯ, ಅಗತ್ಯವಿರುವ ಸೌಲಭ್ಯ ಹಾಗೂ ಸಮಸ್ಯೆಗಳ ಬಗ್ಗೆ ಆಲಿಸಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ಕನಸುಗಳ ಬಗ್ಗೆ ಹಂಚಿಕೊAಡಾಗ ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುವಂತಹ ಪ್ರೇರಣಾದಾಯಕ ಮಾತು ಹೇಳಿ ಹುರಿದುಂಬಿಸಿದರು.
ಶಾಲೆಯ ಅಧ್ಯಕ್ಷ ಶಿವಾನಂದ ರೇಶ್ಮಿ ಹಾಗೂ ಮುಖ್ಯೋಪಾಧ್ಯಾಯರು ಡಾ. ಸುಜಾತಾ ಬಿರಾದಾರ ಅವರು, ಶಾಲೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ಮಕ್ಕಳಿಗೆ ಎದುರಾಗುತ್ತಿರುವ ತೊಂದರೆಗಳನ್ನು ಸಚಿವರ ಗಮನಕ್ಕೆ ತಂದರು. ವಿಶೇಷವಾಗಿ ಆಟದ ಮೈದಾನ, ಶೌಚಾಲಯ, ಶುದ್ಧ ಕುಡಿಯುವ ನೀರು ಅವಶ್ಯಕತೆ ಮುಂತಾದ ಅನೇಕ ಅಂಶಗಳ ಬಗ್ಗೆ ಉಲ್ಲೇಖ ಮಾಡಿದರು. ಸಚಿವರು ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ, "ವಿಕಲಚೇತನ ಮಕ್ಕಳ ಶಿಕ್ಷಣವು ಅತ್ಯಂತ ಮೌಲ್ಯಮಯ ಮತ್ತು ಆಪ್ತವಾಗಿರಬೇಕು. ಸರಕಾರದ ಮಟ್ಟದಲ್ಲಿ ಸಾಧ್ಯವಾದಷ್ಟು ಸಹಾಯ ಮಾಡುವ ಭರವಸೆ ನೀಡುತ್ತೇನೆ" ಎಂದು ತಿಳಿಸಿದರು.
ಸಭೆಯ ಅಂತ್ಯದಲ್ಲಿ ಮಕ್ಕಳೊಂದಿಗೆ ಸಂತಸವಾಗಿ ಮಾತನಾಡಿದ ಸಚಿವರು, ಅವರ ಚಟುವಟಿಕೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಲೆಯ ಕಾರ್ಯತತ್ಪರತೆಯನ್ನು ಪ್ರಶಂಸಿಸಿದ ಅವರು, ಈ ಸಂಸ್ಥೆಗೆ ಬೇಕಾದ ಅಗತ್ಯ ನೆರವಿನ ಬಗ್ಗೆ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ರಾಜು ಆಲಗೂರ, ಹಿರಿಯ ಕಾಂಗ್ರೆಸ್ ಮುಖಂಡರಾದ ಹಮೀದ್ ಮುಶ್ರಿಫ್, ಜಮೀರ್ ಬಕ್ಷಿ ಹಾಗೂ ವಿಕಲಚೇತನರ ಕಲ್ಯಾಣಾಧಿಕಾರಿಗಳಾದ ಜಗದೀಶ್ ಕೆಂಪಲಿ0ಗಣ್ಣವರ್ ಅವರು ಉಪಸ್ಥಿತರಿದ್ದರು.