ಮುಳವಾಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು : ಸಚಿವ ಶಿವಾನಂದ ಪಾಟೀಲ ಕಾರ್ಯವೈಖರಿ ಮೆಚ್ಚಿ ಕೈಹಿಡಿದ ಕಮಲ ಪಕ್ಷದವರು

Jul 15, 2025 - 20:44
 0
ಮುಳವಾಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು : ಸಚಿವ ಶಿವಾನಂದ ಪಾಟೀಲ ಕಾರ್ಯವೈಖರಿ ಮೆಚ್ಚಿ ಕೈಹಿಡಿದ ಕಮಲ ಪಕ್ಷದವರು
ಬಸವನಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ಮುಳವಾಡ ಗ್ರಾಮ ಪಂಚಾಯತ್ ಅಧ್ಯಕ್ಷ- ಉಪಾಧ್ಯಕ್ಷ ಸೇರಿದಂತೆ 6 ಸದಸ್ಯರು ಬಿಜೆಪಿ ತೊರೆದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ

ವಿಜಯಪುರ : ಬಸವನಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ಮುಳವಾಡ ಗ್ರಾಮ ಪಂಚಾಯತ್ ಅಧ್ಯಕ್ಷ- ಉಪಾಧ್ಯಕ್ಷ ಸೇರಿದಂತೆ 6 ಸದಸ್ಯರು ಬಿಜೆಪಿ ತೊರೆದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ವಿಜಯಪುರ ನಗರದಲ್ಲಿರುವ ಸಚಿವ ಶಿವಾನಂದ ಪಾಟೀಲ ಅವರ ಗೃಹ ಕಛೇರಿಗೆ ಆಗಮಿಸಿದ ಮುಳವಾಡ ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯರು ಅಧ್ಯಕ್ಷ ಬಾಳು ಚಿನಕೇಕರ, ಉಪಾಧ್ಯಕ್ಷೆ ಮಧುಮತಿ ಅ. ಧನ್ಯಾಳ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ-ಹಾಲಿ ಸದಸ್ಯರಾದ ಹನುಮಂತ ಕಳಸಗೊಂಡ, ಸದಸ್ಯರಾದ ರಮೇಶ ಕೋಳೂರ,  ರಮೇಶ ಭಜಂತ್ರಿ ಇವರು ಗ್ರಾಮದ ಮುಖಂಡರ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ ಮುಳವಾಡ ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು. 

ಬಸವವನಬಾಗೇವಾಡಿ ಕ್ಷೇತ್ರದಲ್ಲಿ ನಡೆಸಿರುವ ಅಭಿವೃದ್ಧಿ ಕಾರ್ಯಗಳಿಗಾಗಿ ಸಚಿವರಾದ ಶಿವಾನಂದ ಪಾಟೀಲ ಅವರನ್ನು ಸನ್ಮಾನಿಸಿ ಮಾತನಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಳು ಚಿನಕೇಕರ, ಇದು ಚುನಾವಣಾ ಸಂದರ್ಭ ಇಲ್ಲ, ಆದರೆ ಕ್ಷೇತ್ರದ ಅಭಿವೃದ್ಧಿ ಮೆಚ್ಚಿ  ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದೇವೆ.  ಬಸವನ ಬಾಗೇವಾಡಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಚಿವ ಶಿವಾನಂದ ಪಾಟೀಲ ಅವರು ಕ್ಷೇತ್ರದಲ್ಲಿ ನಡೆಸಿರುವ ಅಭಿವೃದ್ಧಿ ಕಾರ್ಯಗಳು ರಾಜ್ಯಕ್ಕೆ ಮಾದರಿಯಾಗಿವೆ. ಇದನ್ನು ಮೆಚ್ಚಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆಗುತ್ತಿರುವುದಾಗಿ ವಿವರಿಸಿದರು.

ಬಳಿಕ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಅವರು, 
ರಾಜಕೀಯಕ್ಕಿಂತ ಕ್ಷೇತ್ರದ ಅಭಿವೃದ್ಧಿಗೆ ನಾನು ಹೆಚ್ಚು ಆದ್ಯತೆ ನೀಡುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿ ಹೊರತಾಗಿ ಯಾವುದೇ ಟೀಕೆಗಳಿಗೆ ಕಿವಿಗೊಡುವುದಿಲ್ಲ ಎಂದರು.

ಗ್ರಾಮದ ಮುಖಂಡರಾದ ಶೇಖಪ್ಪ ಬಿಳಗಿ, ಶಿವಪ್ಪ ಗಾಯಕವಾಡ, ಡಿ.ಸಿ. ಹಿರೇಕುರುಬರ, ರವಿ ಕೆಂಗನಾಳ, ಸದಾಶಿವ ಕುಬಕಡ್ಡಿ, ಸಂಗನಗೌಡ ಪಾಟೀಲ, ಹಮೀದ ಹವಾಲ್ದಾರ್, ಮಲ್ಲು ಅಸಂಗಿ, ಶಿವಾಜಿ ಶೇಳಂಕರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.