ಮೃತ ಗದಿಗೆಪ್ಪ ಕುಟುಂಬಕ್ಕೆ ಸಚಿವ ಪಾಟೀಲ ೧ ಲಕ್ಷ ಆರ್ಥಿಕ ನೆರವು

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ಹಾವೇರಿ : ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಡ್ಡದಮಲ್ಲಾಪುರ ಗ್ರಾಮದಲ್ಲಿ ಗೋಡೆ ಕುಸಿದು ಮೃತಪಟ್ಟಿದ್ದ ರೈತ ಗದಿಗೆಪ್ಪ ಕೊಪ್ಪದ ಕುಟುಂಬಕ್ಕೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ವೈಯಕ್ತಿಕವಾಗಿ ೧ ಲಕ್ಷ ರೂ. ಆರ್ಥಿಕ ನೆರವು ವಿತರಿಸಿದರು.
ಸೋಮವಾರ ಹಾವೇರಿ ನಗರದಲ್ಲಿ ಜರುಗಿದ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಮೃತ ಗದಿಗೆಪ್ಪ ಅವರ ಪುತ್ರ ಮೂಕೇಶ ಕೊಪ್ಪದ ಅವರನ್ನು ಕರೆಸಿ ೧ ಲಕ್ಷ ರೂ. ನಗದು ಪರಿಹಾರವನ್ನು ಹಸ್ತಾಂತರಿಸಿದರು.
ಇದೇ ವೇಳೆ ಶಾಸಕರಾದ ಬಸವರಾಜ ಶಿವಣ್ಣವರ, ಪ್ರಕಾಶ ಕೋಳಿವಾಡ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ. ಸಿಇಒ ರುಚಿರಾ ಬಿಂದು, ಎಸ್ಪಿ ಯಶೋಧಾ ವಂಟಗೋಡಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ಕಾನಿಪ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಹಾವೇರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಂಜೀವ ನೀರಲಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.