ಅರ್ಹ ಫಲಾನುಭವಿಗಳು ಹೊರಗುಳಿಯದಂತೆ ನೋಡಿಕೊಳ್ಳಿ : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್.ಪಾಟೀಲ

ವಿಜಯಪುರ : ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಸಮರ್ಪಕ ಅನುಷ್ಟಾನಗೊಳಿಸುವ ಮೂಲಕ ಯಾವುದೇ ಅರ್ಹಫಲಾನುಭವಿಗಳು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಸೂಚಿಸಿದರು.
ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಡವರ ಪಾಲಿನ ಅಕ್ಕಿ ದುರುಪಯೋಗವಾಗದಂತೆ ಕಟ್ಟುನಿಟ್ಟಿನ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
ಸರ್ಕಾರ ಅಧಿಕಾರ ವಹಿಸಿಕೊಂಡು ೨ ವರ್ಷಗಳನ್ನು ಪೂರೈಸಿದೆ. ಅಧಿಕಾರ ವಹಿಸಿಕೊಂಡ ಒಂದು ವರ್ಷದಲ್ಲಿಯೇ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ, ಜನರಿಗೆ ಅನುಕೂಲ ಕಲ್ಪಿಸಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಪಂಚ ಗ್ಯಾರಂಟಿ ಯೋಜನೆಯಡಿ ೩೧೭೭.೭೮ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಈ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪುವಂತಾಗಬೇಕು. ಈ ಕುರಿತು ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸಬೇಕು. ಕಟ್ಟ ಕಡೆಯ ಅರ್ಹ ಫಲಾನುಭವಿಗಳಿಗೆ ಯೋಜನೆ ಲಾಭ ದೊರಕಿಸಬೇಕು. ಪಂಚಾಯತಿ ಮಟ್ಟಗಳಲ್ಲಿ ಶಿಬಿರಗಳನ್ನು ಆಯೋಜಿಸಿ ಯೋಜನೆಗಳ ಲಾಭ ದೊರಕಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು.
ಗೃಹ ಜ್ಯೊತಿ ಯೋಜನೆಯಡಿ ಪ್ರತಿ ಫಲಾನುಭವಿಗಳಿಗೆ ೨೦೦ ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈ ಯೋಜನೆಯಿಂದ ಯಾವುದೇ ಫಲಾನುಭವಿ ವಂಚಿತರಾಗದAತೆ ಫಲಾನುಭವಿಗಳನ್ನು ಗುರುತಿಸಿ, ಮಾಹಿತಿ ಒದಗಿಸಿ ಯೋಜನೆಯ ಲಾಭ ದೊರಕಿಸಬೇಕು. ಗೃಹ ಲಕ್ಷಿö್ಮÃ ಯೋಜನೆಯಡಿ ಪಡೆದ ಹಣದಿಂದ ತಮ್ಮ ಬದುಕಿನಲ್ಲಿ ಆದ ಬದಲಾವಣೆಗಳ ಕುರಿತ ಫಲಾನುಭವಿಗಳ ಯಶೋಗಾಥೆ ಪ್ರಕಟಿಸುವ ಮೂಲಕ ಯೋಜನೆಗಳ ಮಾಹಿತಿ ಪ್ರತಿಯೊಬ್ಬರಿಗೂ ತಲುಪಿಸಲು ವ್ಯಾಪಕವಾಗಿ ಪ್ರಚಾರ ಕೈಗೊಳ್ಳುವಂತೆ ಅವರು ಸೂಚಿಸಿದರು.
ಶಕ್ತಿ ಯೋಜನೆಯಡಿ ಮೇ.೨೦೨೫ರ ಅಂತ್ಯದವರೆಗೆ ೧೩.೧೮ ಕೋಟಿ ಮಹಿಳೆಯರು ಪ್ರಯಾಣ ಬೆಳೆಸಿದ್ದು, ಒಟ್ಟು ೪೨೬ ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರತಿ ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ, ಶೌಚಾಲಯ, ಶುದ್ಧ ಕುಡಿಯುವ ನೀರು, ಮಹಿಳೆಯರಿಗೆ ವಿಶ್ರಾಂತಿ ಕೊಠಡಿಗಳ ಸೌಲಭ್ಯ ಸೇರಿದಂತೆ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಅವರು ತಿಳಿಸಿದರು.
ಯುವ ನಿಧಿ ಯೋಜನೆಯಿಂದ ಹಲವು ನಿರುದ್ಯೋಗಿಗಳಿಗೆ ಸಹಕಾರಿಯಾಗಿದೆ. ಯುವಕರಿಗೆ ತರಬೇತಿ ಮತ್ತು ಉದ್ಯೋಗ ಮೇಳಗಳನ್ನು ಆಯೋಜಿಸಬೇಕು.ನಿರುದ್ಯೋಗಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆಸಕ್ತಿ ತೋರುವಂತೆ ಕ್ರಮವಹಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತ್‌ಗಳಲ್ಲಿ ಹಾಗೂ ಎಲ್ಲ ಸರ್ಕಾರಿ ಕಚೇರಿಗಳಲ್ಲಿ, ಪಡಿತರ ಅಂಗಡಿಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರ ಫಲಕಗಳನ್ನು ಅಳವಡಿಸಬೇಕು. ಮುಂದಿನ ಸಭೆಯೊಳಗಾಗಿ ಪ್ರಚಾರ ಫಲಕ ಅಳವಡಿಸಿರುವ ಮಾಹಿತಿ ಒದಗಿಸಬೇಕು ಎಂದು ಹೇಳಿದರು.
ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಜಯಪುರ ಜಿಲ್ಲೆ ರಾಜ್ಯದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ತಿಕೋಟಾ ತಾಲೂಕು ಗೃಹಲಕ್ಷಿö್ಮ ಯೋಜನೆ ಅನುಷ್ಠಾನದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಗುರುತಿಸಿ ಅರ್ಹ ಫಲಾನುಭವಿಗಳಿಗೆ ಯೋಜನೆ ವ್ಯಾಪ್ತಿಗೊಳಪಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ, ಉಪಾಧ್ಯಕ್ಷ ಹೊನ್ನಮಲ್ಲ ಸಾರವಾಡ, ಸುಂದರಪಾಲ ರಾಠೋಡ, ನಬಿಲಾಲ ನಾಯ್ಕೋಡಿ, ಆನಂದ ಜಾಧವ, ಮಹಾದೇವಿ ಗೋಕಾಕ, ಸದ್ಯರಾದ ಆರತಿ ನಾವಿ, ಸಾಹೇಬಗೌಡ ಬಿರಾದಾರ, ಮಲ್ಲಪ್ಪ ದಳವಾಯಿ, ಗುರುಪಾದಗೌಡ ದಾಶ್ಯಾಳ, ಶ್ರೀಶೈಲ ಕವಲಗಿ, ರವಿದಾಸ ಜಾಧವ, ಮೈಬೂಬಸಾಬ ನಾಯ್ಕೊಡಿ, ಸಂತೋಷ ಗಣಾಚಾರಿ, ಶಂಕರಗೌಡ ಹಿರೇಗೌಡರ, ಚಂದ್ರಶೇಖರ ಹಳೆಮನಿ, ರಾಜಶೇಖರ ಅವಜಿ, ಪ್ರಶಾಂತ ಕಾಳೆ, ಸಂಗನಗೌಡ ದೇಸಾಯಿ, ಶರಣಬಸಪ್ಪ ಚೌರ ಸೇರಿದಂತೆ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.