ಯೋಗ ಸೂಕ್ಷ್ಮವಾದ ಆಧ್ಯಾತ್ಮಿಕ ಶಿಸ್ತು : ಸಂಗಮೇಶ ಬಬಲೇಶ್ವರ

ವಿಜಯಪುರ : ದೈಹಿಕ ಹಾಗೂ ಮಾನಸಿಕ ಸದೃಢತೆ ಹಾಗೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದೈನಂದಿನ ಜೀವನದಲ್ಲಿ ಯೋಗವನ್ನು ನಮ್ಮ ದಿನಚರಿಯನ್ನಾಗಿ ಮಾಡಿಕೊಳ್ಳಬೇಕೆಂದು ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಕರೆ ನೀಡಿದರು.
ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಧಾರವಾಡ ಬಾಲ ವಿಕಾಸ ಅಕಾಡೆಮಿ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಹಯೋಗದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜೂನ್ ೨೧ರಂದು ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ನಡೆದ ೧೧ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಯೋಗೋತ್ಸವ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಯೋಗವು ಈ ದೇಶದ ಕೊಡುಗೆಯಾಗಿದೆ. ಇದು ಸಾವಿರಾರು ವರ್ಷಗಳಿಂದ ಇದೆ. ಯೋಗವು ಅತ್ಯಂತ ಸೂಕ್ಷ್ಮವಾದ ವಿಜ್ಞಾನವನ್ನು ಆಧರಿಸಿದ ಆಧ್ಯಾತ್ಮಿಕ ಶಿಸ್ತು, ಇದು ಮನಸ್ಸು ಮತ್ತು ದೇಹದ ನಡುವಿನ ಸಮತೋಲನೆ ತರುತ್ತದೆ. ಯೋಗವು ಆರೋಗ್ಯಕರ ಜೀವನದ ಕಲೆ ಮತ್ತು ವಿಜ್ಞಾನವಾಗಿದೆ. ಮನಸ್ಸು ಮತ್ತು ದೇಹ, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಪರಿಪೂರ್ಣ ಸಾಮರಸ್ಯವಾಗಿದೆ.ದೈಹಿಕ, ಮಾನಸಿಕ ಸದೃಢತೆಗೆ ಯೋಗ ಸಹಕಾರಿ. ಜೀವನದಲ್ಲಿ ಪ್ರತಿನಿತ್ಯ ಯೋಗ ರೂಡಿಸಿಕೊಳ್ಳಬೇಕು. ನಿಯಮಿತ ಯೋಗ ಮಾಡುವುದರ ಮೂಲಕ ಆರೋಗ್ಯ ದೃಢತೆ ಹಾಗೂ ಚೈತನ್ಯಯುಕ್ತ ಬದುಕು ನಡೆಸಬಹುದಾಗಿದೆ. ಕರೋನ ನಂತರ ಜಗತ್ತು ಯೋಗದ ಕಡೆಗೆ ನೋಡುತ್ತಿದೆ ಎಂದು ಹೇಳಿದರು.
ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ನಾಡಿನ ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಸದಾ ಬದ್ಧವಾಗಿದ್ದು, ನಾಡಿನ ಮಕ್ಕಳ ಆರೋಗ್ಯಪೂರ್ಣ ಜೀವನಕ್ಕಾಗಿ ಕಟಿಬದ್ಧವಾಗಿ ಕಾರ್ಯಮಾಡುತ್ತದೆ. ಇದಕ್ಕೆ ಪೂರಕವಾಗಿ ರಾಜ್ಯ ಮಟ್ಟದ ಯೋಗೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳು ಇಂತಹ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಆರೋಗ್ಯಯುತ ಜೀವನ ಮತ್ತು ಯೋಗಮಯ ಸಂತೃಪ್ತ ಜೀವನ ನಡೆಸುವಂತಾಗಬೇಕು ಎಂಬ ಸದಾಶಯದಿಂದ ಅಂತರರಾಷ್ಟ್ರೀಯ ಯೋಗ ದಿನದ ಈ ಸುಸಂದರ್ಭದಲ್ಲಿ ಯೋಗೋತ್ಸವ ಹಮ್ಮಿಕೊಳ್ಳಲಾಗಿದೆ. ರಾಜ್ಯ,ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಯೋಗದಲ್ಲಿ ಸಾಧನೆ ಮಾಡಿದ ಸಾಧಕ ಮಕ್ಕಳಿಂದ ಯೋಗ ಪ್ರದರ್ಶನ ಅಕಾಡೆಮಿಯಿಂದ ಆನಲೈನ್ ಮೂಲಕ ಬಿತ್ತರಿಸುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ಯೋಗವನ್ನು ಪಾಶ್ಚಿಮಾತ್ಯ ಜಗತ್ತಿಗೆ ಪರಿಚಯಿಸಿದ ಹೆಮ್ಮೆ ನಮ್ಮ ದೇಶಕ್ಕಿದೆ.ಈ ದಿನ ದೇಶ- ವಿದೇಶಗಳಲ್ಲೂ ಅಂತಾರಾಷ್ಟ್ರೀಯ ಯೋಗ ದಿನ ಅಚರಿಸಲಾಗುತ್ತಿದ್ದು, ಯೋಗವು ಪ್ರಪಂಚದಾದ್ಯAತ ಜನಪ್ರಿಯವಾಗಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿ ಸಾಧನವಾಗಿದೆ. ಯೋಗದಿಂದ ಅನೇಕ ಆರೋಗ್ಯ ಪ್ರಯೋಜನಗಳಿದ್ದು,ಯೋಗ ರೂಢಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು.
-ಟಿ.ಭೂಬಾಲನ್ ಜಿಲ್ಲಾಧಿಕಾರಿ
ಸಾಮೂಹಿಕ ಯೋಗಾಭ್ಯಾಸ : ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷ ವಾಕ್ಯದೊಂದಿಗೆ ನಡೆದ ೧೧ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯೋಗಾಸಕ್ತರಿಗೆ ೪೫ ನಿಮಿಷಗಳ ಕಾಲ ಯೋಗ ಪ್ರಾತ್ಯಕ್ಷಿಕೆ ಮಾಡಿಸಲಾಯಿತು. ಶ್ರೀಮತಿ ಸುನೀತಾ ಬಿರಾದಾರ, ಜ್ಯೋತಿ, ಗೀತಾಂಜಲಿ ದಾಸರ, ಶುಭಂ ಅವರು ಯೋಗಾಸನ ಮತ್ತು ಪ್ರಾಣಾಯಾಮದ ಅಭ್ಯಾಸ ಮಾಡಿಸಿದರು.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾತನಾಡಿ ಈ ಬಾರಿಯ ಘೋಷ ವಾಕ್ಯ ಒಂದು ಆರೋಗ್ಯ ಒಂದು ಭೂಮಿ ಎಂಬುದಾಗಿದೆ. ಈ ಭುವಿ ನಮಗೆ ಎಲ್ಲವನ್ನೂ ನೀಡಿದೆ. ನಮ್ಮ ಪರಿಸರ ಮಾಲಿನ್ಯ ಮಾಡದೇ ಸಂರಕ್ಷಿಸುವ ಮೂಲಕ ನಮ್ಮ ಮುಂದಿನ ಪೀಳಿಗೆಗೆ ಉತ್ತಮವಾದ ಕೊಡುಗೆ ನೀಡುವ ನಮ್ಮ ಹೊಣೆಯಾಗಿದೆ. ಯೋಗವನ್ನು ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದೋಣ ಎಂದ ಅವರು, ಭವ್ಯ ಭವಿಷ್ಯ ಬೆಳಗುವ ಮಕ್ಕಳಿಗೆ ಆರೋಗ್ಯದ ಮಹತ್ವ ತಿಳಿಸಿಕೊಡಬೇಕು. ಸದೃಢ ದೇಹದಲ್ಲಿ ಸದೃಢ ಮನಸ್ಸಿದೆ ಎಂಬAತೆ ಯೋಗ,ಕ್ರೀಡಾ ಚಟುವಟಿಕೆಗಳನ್ನು ದೈನಂದಿನ ಭಾಗವಹಿಸಿಕೊಂಡು ಆರೋಗ್ಯಯುತ ಜೀವನ ನಡೆಸಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬಿ ನಿಂಬರಗಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ವಿಜಯಕುಮಾರ ಅಜೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ ಚವ್ಹಾಣ,ಜಿಲ್ಲಾ ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿಗಳಾದ ಡಾ,ವಿದ್ಯಾವತಿ ಅಥಣಿ, ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್ ಧೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯ,ಪತಂಜಲಿ ಯೋಗ ಸಂಸ್ಥೆ ಹಾಗೂ ಆಯುರ್ವೇದ, ಯುನಾನಿ, ಎನ್ ಸಿಸಿ ಹಾಗೂ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ವಿರೇಶ ವಾಲಿ ತಂಡದಿAದ ನಾಡಗೀತೆ ಪ್ರಸ್ತುತಪಡಿಸಲಾಯಿತು.