ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ : ಉಜ್ವಲ್‌ಕುಮಾರ ಘೋಷ್

Jul 1, 2025 - 23:14
 0
ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ : ಉಜ್ವಲ್‌ಕುಮಾರ ಘೋಷ್
ವಿಜಯಪುರ : ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯ ಫಲಿತಾಂಶ ಸುಧಾರಣೆಗೆ ಸಂಬ0ಧಿಸಿದ ಅಧಿಕಾರಿಗಳು ಈಗಿನಿಂದಲೇ ಯೋಜನಾಬದ್ಧವಾಗಿ ಕಾರ್ಯ ನಿರ್ವಹಿಸುವ ಮೂಲಕ ಅಗತ್ಯ ಕ್ರಮ ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುವರ್ಣ ಆರೋಗ್ಯ ಟ್ರಸ್ಟ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್ ಕುಮಾರ ಘೋಷ್ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವರ ಶೈಕ್ಷಣಿಕ ಗುಣಮಟ್ಟ ಸುಧಾರಿಸಿ, ಉತ್ತಮ ಫಲಿತಾಂಶಕ್ಕಾಗಿ ಸೂಕ್ಷ್ಮ ಯೋಜನೆಗಳನ್ನು ರೂಪಿಸಿ, ಆ ಯೋಜನೆಯ ಅನುಗುಣವಾಗಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಸೂಚಿಸಿದರು.ಅನುದಾನಿತ ಶಾಲೆಗಳಲ್ಲಿ ಅಗತ್ಯಕ್ಕೆ ಅನುಸಾರವಾಗಿ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮಗಳನ್ನು ಕೈಗೊಳ್ಳವಂತೆ ಸಂಸ್ಥೆಗಳಿಗೆ ಸೂಚಿಸಬೇಕು ಹಾಗೂ ಫಲಿತಾಂಶ ಹೆಚ್ಚಿಸಲು ಕ್ರಮ ತೆಗೆದುಕೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಾಥಮಿಕ ಶಾಲಾ ಹಂತದಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರಿಗೆ ಪ್ರೋತ್ಸಾಹಿಸಿ, ಪ್ರಾಥಮಿಕ ಹಂತದಲ್ಲೇ ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಿದಲ್ಲಿ ಪ್ರೌಢಶಾಲೆ ಹಾಗೂ ಪದವಿ ಪೂರ್ವಗಳ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶಗಳನ್ನು ಉತ್ತಮಪಡಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.ಜಿಲ್ಲೆಯ ವಿವಿಧ ತಾಲೂಕಿನಲ್ಲಿ ನಿರ್ಮಿಸುತ್ತಿರುವ ಪ್ರಜಾಸೌಧಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ವಿವಿಧ ಕಚೇರಿಗಳಲ್ಲಿ ಕೆಸ್ವಾನ್ ಸಂಪರ್ಕ ಹೊಂದಿದ್ದಲ್ಲಿ ಇ-ಆಫೀಸ್ ಅನುಷ್ಟಾನಗೊಳಿಸುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಉತ್ತಮ ಫಲಿತಾಂಶಕ್ಕಾಗಿ ರೂಪಿಸಿರುವ ಯೋಜನೆಗಳ ಕುರಿತು ಹಾಗೂ ಪ್ರತಿ ವಾರ ಶಿಕ್ಷಣದ ಅಭಿವೃದ್ದಿ ಬಗ್ಗೆ ವರದಿ ನೀಡುವಂತೆ ಸಂಬ0ಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ವಿಜಯ ಕುಮಾರ್ ಆಜೂರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಸಂಪತ್ ಗುಣಾರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಕೆ.ಹೊಸಮನಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಮತಿ ಪಿ.ಎಸ್.ಕೋಲಾರ, ಎಲ್ಲ ತಾಲೂಕಿನ ಬಿ.ಇ.ಒ, ಸಿ.ಆರ್.ಪಿ, ಡಿ.ಆರ್.ಪಿ, ಶಿಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.
ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುವರ್ಣ ಆರೋಗ್ಯ ಟ್ರಸ್ಟ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್ ಕುಮಾರ ಘೋಷ್ ಅವರು ಮಂಗಳವಾರ ಜಿಲ್ಲಾ ಪಂಚಾಯತಿಯ ಮಿನಿ ಸಭಾ ಭವನದಲ್ಲಿ ವಿವಿಧ ಇಲಾಖೆಯ ಯೋಜನಾ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗಾಗಿ ಎಲ್ಲ ಇಲಾಖೆಗಳು ತಮ್ಮ ಇಲಾಖಾ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಟಾಗೊಳಿಸಿ, ನಿಗದಿ ಪಡಿಸಿದ ಗುರಿ ಸಾಧನೆ ಹಾಗೂ ಜಿಲ್ಲೆಯ ಆಸ್ಪತ್ರೆ ಹಾಗೂ ಶಾಲೆಗಳ ದುರಸ್ತಿಗಳ ಪಟ್ಟಿ ಸಿದ್ಧಪಡಿಸಿ ಪತ್ರ ಬರೆಯುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ವಸತಿ ನಿಲಯಗಳಲ್ಲಿ ಹೆಚ್ಚುವರಿಯಾದ ವಿದ್ಯಾರ್ಥಿಗಳಿಗೆ ಬಾಡಗಿ ಕಟ್ಟಡ ಪಡೆದು, ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮವಹಿಸಬೇಕು. ವಿವಿಧ ಯೋಜನೆಯಡಿ ಕಂದಾಯ ಇಲಾಖೆಗೆ ಬಂದ0ತಹ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ, ಅರ್ಜಿಗಳ ಇತ್ಯರ್ಥಕ್ಕೆ ಕ್ರಮವಹಿಸಬೇಕೆಂದು ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿಗಳಾದ ವಿಜಯ ಕುಮಾರ್ ಆಜೂರ್, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಸಂಪತ್ ಗುಣಾರಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಕೋಲಾರ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ರಾಹುಲ್ ಕುಮಾರ್ ಬಾವಿದೊಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ ಜಿಲ್ಲಾ ಪಂಚಾಯತಿಯ ಯೋಜನಾ ಮತ್ತು ಅಂದಾಜು ಮೌಲ್ಯಮಾಪನ ಅಧಿಕಾರಿಗಳಾದ ಎ.ಬಿ.ಅಲ್ಲಾಪೂರ, ಹಾಗೂ ಇತರರು ಉಪಸ್ಥಿತರಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.