ಸ್ತ್ರೀವಾದ ಸರಿಯಾಗಿ ಅರ್ಥಮಾಡಿಕೊಳ್ಳುವುದು ಅಗತ್ಯ : ಪ್ರೊ.ಶುಭಾ ಮರವಂತೆ

Jun 23, 2025 - 23:22
Jun 23, 2025 - 23:48
 0
ಸ್ತ್ರೀವಾದ ಸರಿಯಾಗಿ ಅರ್ಥಮಾಡಿಕೊಳ್ಳುವುದು ಅಗತ್ಯ : ಪ್ರೊ.ಶುಭಾ ಮರವಂತೆ
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರವುದ ವತಿಯಿಂದ ಸೋಮವಾರ ಆಯೋಜಿಸಿದ್ದ ‘ಲಿಂಗತ್ವ ಗ್ರಹಿಕೆ ವಿವಿಧ ಆಯಾಮಗಳುʼ ಎಂಬ ಶೀರ್ಷಿಕೆ ಅಡಿಯಲ್ಲಿ ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಪ್ರೊ. ಶುಭಾ ಮರವಂತೆ, ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ. ಕುಲಸಚಿವ ಶಂಕರಗೌಡ ಸೋಮನಾಳ, ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ. ಲಕ್ಷಿö್ಮÃದೇವಿ ವೈ ಹಾಗೂ ಮತ್ತಿತರು ಪುಸ್ತಕ ಬಿಡುಗಡೆಗೊಳಿಸಿದರು.

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 

ವಿಜಯಪುರ: ಸ್ತಿವಾದವನ್ನು ಪ್ರತಿಯೊಬ್ಬರೂ ಸರಿಯಾಗಿ ಅರ್ಥಮಾಡಿಕೊಳ್ಳುವುದು ಈಗಿನ ಕಾಲದಲ್ಲಿ ಅಗತ್ಯವಾಗಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಪ್ರೊ. ಶುಭಾ ಮರವಂತೆ ಹೇಳಿದರು.        

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಸೋಮವಾರ ಆಯೋಜಿಸಿದ್ದ ‘ಲಿಂಗತ್ವ ಗ್ರಹಿಕೆ ವಿವಿಧ ಆಯಾಮಗಳಲ್ಲಿ' ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.            

ಹೆಣ್ಣು ಗಂಡು ಸಹಜೀವಿಗಳಾಗಿ, ಪರಸ್ಪರ ಪೂರಕವಾಗಿ ಬದುಕಿದಾಗ ಮಾತ್ರ ಸಮತೋಲನದ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಸ್ತಿçÃವಾದವು ಮಹಿಳೆಯರನ್ನು ಸೃಜನಶೀಲರಾಗಿರಲು ಪ್ರೇರೇಪಿಸುವುದಲ್ಲದೆ, ನಮ್ಮೊಳಗಿನ ಸಮಾನತೆಯ ಅರಿವನ್ನು ಎಚ್ಚರಿಸುತ್ತದೆ. ಇದು ಹಕ್ಕುಗಳಿಗಾಗಿ ಹೋರಾಟವಲ್ಲ, ಬದಲಾಗಿ ಮಾನವೀಯ ಮೌಲ್ಯಗಳ ಪ್ರತಿಪಾದನೆ ಎಂದರು.                

ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಸಮಾಜದಲ್ಲಿ ಯಾರು ಶ್ರೇಷ್ಠರು ಅಥವಾ ಕನಿಷ್ಠರು ಎಂಬ ಭಾವನೆಗೆ ಸ್ಥಳವಿಲ್ಲ, ಪ್ರತಿಯೊಬ್ಬರೂ ತಮ್ಮದೇ ಆದ ಶಕ್ತಿ ಮತ್ತು ಸಾಮರ್ಥ್ಯ ಹೊಂದಿದ್ದಾರೆ. ಮಹಿಳೆ ಮತ್ತು ಪುರುಷರು ಸಮಾನವಾಗಿ ಬೆಳೆದುಬರಬೇಕಾದ ಕಾಲ ಇದು. ಇಂದಿನ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಮಹಿಳಾ ಅಧ್ಯಯನ ಶಿಸ್ತು ಕೇವಲ ಅಧ್ಯಯನವಲ್ಲ, ಅದು ಸಮಾನತೆ, ಸಬಲೀಕರಣ ಮತ್ತು ಸಮಾಜಮುಖಿ ಚಿಂತನೆಗಳ ದಿಕ್ಸೂಚಿಯಾಗಬೇಕಿದೆ ಎಂದರು.                    

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ. ಮಾತನಾಡಿ, ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆಯುವ ಎಲ್ಲಾ ಕಾರ್ಯಚಟುವಟಿಕೆಗಳು ಮಹಿಳಾ ಸಬಲೀಕರಣಕ್ಕೆ ಭಾಗವಾಗಿರುತ್ತವೆ. ಇಂದಿನ ಯುವಜನತೆ, ವಿಶೇಷವಾಗಿ ವಿದ್ಯಾರ್ಥಿನಿಯರು, ಕೇವಲ ಜ್ಞಾನವನ್ನು ಪಡೆದುಕೊಳ್ಳುವಷ್ಟರಲ್ಲಿ ನಿಲ್ಲದೇ, ಸಮಾಜದಲ್ಲಿ ಸಮಾನತೆಯ ಧ್ವಜದಾರರಾಗಬೇಕು. ಇಂತಹ ನಿಲುವುಗಳು ತಾನಾಗಿಯೇ ಬರುವುದಿಲ್ಲ ಅವುಗಳನ್ನು ಬೆಳಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಿಳಾ ಅಧ್ಯಯನ ಕೇಂದ್ರ ಮತ್ತು ವಿಭಾಗದ ಕಾರ್ಯಚಟುವಟಿಕೆಗಳು ಮಹಿಳಾ ಚೇತನತೆಗೆ ಮಾರ್ಗದರ್ಶನ ನೀಡುತ್ತಿದ್ದು, ಸಮಾನತೆಯ ಅರಿವನ್ನು ಮತ್ತಷ್ಟು ಗಾಢಗೊಳಿಸುತ್ತಿವೆ ಎಂದರು.        

ಕಾರ್ಯಕ್ರಮದಲ್ಲಿ ಡಾ. ಕಲಾವತಿ ಕಾಂಬಳೆ, ಡಾ. ಸರೋಜಾ ಸಂತಿ, ಡಾ.ರಜಿಯಾ  ನದಾಫ ಉಪಸ್ಥಿತರಿದ್ದರು. ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ. ಲಕ್ಷಿö್ಮÃದೇವಿ ವೈ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಡಾ.ಶಶಿಕಲಾ ರಾಠೋಡ ನಿರೂಪಿಸಿದರು. ಡಾ. ಭಾಗ್ಯಶ್ರೀ ದೊಡಮನಿ ವಂದಿಸಿದರು. 

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.