ಮಾಜಿ ಸಭಾಪತಿ ಎನ್.ತಿಪ್ಪಣ್ಣಗೆ ಮಹಿಳಾ ವಿವಿಯಿಂದ ಶ್ರದ್ಧಾಂಜಲಿ

Jul 12, 2025 - 08:53
 0
ಮಾಜಿ ಸಭಾಪತಿ ಎನ್.ತಿಪ್ಪಣ್ಣಗೆ ಮಹಿಳಾ ವಿವಿಯಿಂದ ಶ್ರದ್ಧಾಂಜಲಿ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ


ವಿಜಯಪುರ: ವಿಧಾನ ಪರಿಷತ್‌ನ ಮಾಜಿ ಸಭಾಪತಿ ಹಾಗೂ ಹಿರಿಯ ಮುಖಂಡ ಎನ್.ತಿಪ್ಪಣ್ಣ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ಅಧಿಕಾರಿಗಳು ಎರಡು ನಿಮಿಷಗಳ ಮೌನ ಆಚರಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.                 

ಈ ಸಂದರ್ಭದಲ್ಲಿ ಮಾತನಾಡಿದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರು, ನಮ್ಮ ಮಹಿಳಾ ವಿಶ್ವವಿದ್ಯಾನಿಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿದ್ದ ಎನ್.ತಿಪ್ಪಣ್ಣ ಅವರು ವಿವಿ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಕೊಡುಗೆಯನ್ನು ಈ ಸಂದಭದಲ್ಲಿ ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.        

ಚಿತ್ರದುರ್ಗ ಜಿಲ್ಲೆಯ ತುರುವನೂರಿನಲ್ಲಿ ಜನಿಸಿದ ಎನ್.ತಿಪ್ಪಣ್ಣ ಅವರು ಕರ್ನಾಟಕದ ಕಾನೂನು, ರಾಜಕೀಯ ಮತ್ತು ಸಾಮಾಜಿಕ-ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಆರು ದಶಕಗಳಿಗೂ ಹೆಚ್ಚು ಕಾಲ ಗಮನಾರ್ಹ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಅವರ ಅಗಲುವಿಕೆ ರಾಜ್ಯಕ್ಕೆ ಮತ್ತು ನಮ್ಮ ಮಹಿಳಾ ವಿವಿಗೆ ಅಪಾರ ನಷ್ಟ ಉಂಟು ಮಾಡಿದೆ ಎಂದರು.            

ಐಕ್ಯುಎಸಿ ನಿರ್ದೇಶಕ ಪ್ರೊ.ಪಿ.ಜಿ.ತಡಸದ ಅವರು ಮಾತನಾಡಿ, ಎನ್.ತಿಪ್ಪಣ್ಣ ಅವರು, ಕರ್ನಾಟಕ ವಿಧಾನ ಪರಿಷÀತ್ತಿಗೆ ನಾಲ್ಕು ಬಾರಿ ಆಯ್ಕೆಯಾಗಿದ್ದರು ಮತ್ತು ಎರಡು ಬಾರಿ ವಿಧಾನ ಪರಿಷÀತ್ ಸಭಾಪತಿಯಾಗಿ ಕಾಯ ನಿರ್ವಹಿಸಿದವರು. 

ಮಹಿಳಾ ವಿವಿಯ ಅಕಾಡೆಮಿಕ್ ಕೌನ್ಸಿಲ್ ಸಭೆಗಳಲ್ಲಿ ಅತ್ಯಂತ ಶಿಸ್ತಿನಿಂದ ಭಾಗವಹಿಸುತ್ತಿದ್ದ ಅವರು ಪ್ರತಿಯೊಂದು ವಿಷಯಗಳನ್ನೂ ಗಂಭೀರವಾಗಿ ಚರ್ಚಿಸುತ್ತಿದ್ದರು ಎಂದರು.            

ಶ್ರದ್ದಾಂಜಲಿ ಸಭೆಯಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಕುಲಸಚಿವ ಮೌಲ್ಯಮಾಪನ ಪ್ರೊ.ಎಚ್. ಎಂ.ಚಂದ್ರಶೇಖರ್, ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು/ಸಂಯೋಜಕರು ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.