ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ಬಹು ನಿರೀಕ್ಷಿತ 'ಬಲರಾಮನ ದಿನಗಳು’ ಚಿತ್ರದ ಚಿತ್ರೀಕರಣ ಪೂರ್ಣ

Jul 17, 2025 - 23:13
 0
ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ಬಹು ನಿರೀಕ್ಷಿತ 'ಬಲರಾಮನ ದಿನಗಳು’ ಚಿತ್ರದ ಚಿತ್ರೀಕರಣ ಪೂರ್ಣ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 

 ವಿನೋದ್ ಪ್ರಭಾಕರ್ ಅವರ ಅಭಿನಯದ "ಮಾದೇವ" ಚಿತ್ರ ಭರ್ಜರಿ ಯಶಸ್ಸು ಕಂಡಿದೆ. ಆ ಚಿತ್ರದ ನಂತರ ವಿನೋದ್ ಪ್ರಭಾಕರ್ ಅವರು ನಾಯಕರಾಗಿ ನಟಿಸುತ್ತಿರುವ "ಬಲರಾಮನ ದಿನಗಳು" ಚಿತ್ರ ಸಹ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರಸ್ತುತ ಬಹು ನಿರೀಕ್ಷಿತ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಸಕಲೇಶಪುರ ಮುಂತಾದ ಕಡೆ 80 ದಿನಗಳ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ  ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಲಿದೆ. 

ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರ ಚೊಚ್ಚಲ ನಿರ್ಮಾಣದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಚಿತ್ರವನ್ನು "ಆ ದಿನಗಳು" ಖ್ಯಾತಿಯ ಕೆ‌.ಎಂ.ಚೈತನ್ಯ ನಿರ್ದೇಶಿಸುತ್ತಿದ್ದಾರೆ.  ಟೈಗರ್ ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪ್ರಿಯಾ ಆನಂದ್ ಅಭಿನಯಿಸುತ್ತಿದ್ದಾರೆ‌‌. ಹೆಸರಾಂತ ಕಲಾವಿದರಾದ ಅತುಲ್ ಕುಲಕರ್ಣಿ, ಆಶಿಶ್ ವಿದ್ಯಾರ್ಥಿ ಅವರಂತಹ ಅನುಭವಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. "ಬಿಗ್ ಬಾಸ್" ಖ್ಯಾತಿಯ ವಿನಯ್ ಗೌಡ ಸಹ ಈ ಚಿತ್ರದಲ್ಲ ನಟಿಸಿದ್ದಾರೆ.‌‌ ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಅಭಿನಯಿಸಿರುವ ಖ್ಯಾತ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದು, ಮುಂದಿನ ದಿನಗಳಲ್ಲಿ ಚಿತ್ರತಂಡ ಈ ಕುರಿತು ವಿವರ ನೀಡಲಿದೆ.  

1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಭಾರತದ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ. ಇದು ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿರುವ ಮೊದಲ ಕನ್ನಡ ಚಿತ್ರವಾಗಿದೆ. ವೇಣು "ಬಲರಾಮನ ದಿನಗಳು" ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.